ಕಲಬುರ್ಗಿ ಜಿಲ್ಲೆಯ ಆಫಜಲ್ಪುರ ತಾಲೂಕಿನ ಚಿನಮಗೇರಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಮಹಾಂತಮ್ಮ ಶಿವಪ್ಪ ಜಮಾದಾರ್, ಶಿಕ್ಷಕರು ಮತ್ತು ಸಿಬ್ಬಂದಿಯವರ ನಿರ್ಲಕ್ಷ್ಯದಿಂದ ಬಿಸಿ ಊಟದ ಪಾತ್ರೆಯಲ್ಲಿ ಬಿದ್ದು ಗಂಭೀರ ಗಾಯಕ್ಕೆ ತುತ್ತಾಗಿದ್ದಾಳೆ.
ಕೂಡಲೇ ವಿದ್ಯಾರ್ಥಿನಿಯನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ, ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯರು ಶಿಕ್ಷಕರ ನಿರ್ಲಕ್ಷ ಮತ್ತು ಸಿಬ್ಬಂದಿಯವರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದ್ದು ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು , ಮತ್ತು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.
Post a Comment