Clickable Image

Saturday, August 31, 2024

ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ: ದೈಹಿಕ ಶಿಕ್ಷಕ ಅಮಾನತ್ತು. ನಿರ್ಲಕ್ಷ ವಹಿಸಿದ ಪ್ರಾಂಶುಪಾಲ ಶಿವಪುತ್ರಪ್ಪ ಸಹ ಅಮಾನತು.



*ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ: ದೈಹಿಕ ಶಿಕ್ಷಕ ಅಮಾನತ್ತು ಬೆನ್ನಲ್ಲೆ, ದೂರಿನ ಕುರಿತು ನಿರ್ಲಕ್ಷ್ಯ ವಹಿಸಿದ್ದ ಪ್ರಾಂಶುಪಾಲ ಶಿವಪುತ್ರಪ್ಪ, ಅಮಾನತ್ತು.*

ಕಲಬುರಗಿ:ಆ.31 (ಕ.ವಾ)ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನಲೆಯಲ್ಲಿ ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕ ನನ್ನು ವಿಚಾರಣೆ ಕಾಯ್ದಿರಿಸಿ ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅದೇಶಿಸಿದ್ದರು,




 ಇದರ ಬೆನ್ನಲ್ಲೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ರವರು ವಿದ್ಯಾರ್ಥಿನಿಯರ ದೂರಿನ ಕುರಿತು ನಿರ್ಲಕ್ಷ್ಯ ವಹಿಸಿದ್ದ 

ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶಿವಪುತ್ರಪ್ಪ, ಸಹ ಅಮಾನತ್ತುಗೊಳಿಸಿ ಆದೇಶಿಸಿರುತ್ತಾರೆ. 


     ಶಿಕ್ಷಕನ ಮೇಲೆ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದ ಕುರಿತು ಪ್ರಾಂಶುಪಾಲರಿಗೆ ಲಿಖಿತವಾಗಿ ದೂರು ನೀಡಿದ್ದರು, ಪ್ರಾಂಶುಪಾಲರು ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದ್ದರು ಈ ಆರೋಪದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಸೇವೆಯಿಂದ ಅಮಾನತ್ತು ಮಾಡಿ ಆದೇಶಿಸಿಲಾಗಿದೆ.


       ಇವರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ ನಿಯಮ 98(ಎ) (ಡಿ)ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಹಾಗೂ ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಿರುತ್ತಾರೆ.

Post a Comment

Whatsapp Button works on Mobile Device only