*ಅಕ್ಟೋಬರ್ 23 ರಂದು ಕಿತ್ತೂರ ರಾಣಿ ಚನ್ನಮ್ಮ ಜಯಂತಿ ಆಚರಣೆ*
ಕಲಬುರಗಿ ಅ15 (ಕ.ವಾ) ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ 23 ರಂದು ಬೆಳಿಗ್ಗೆ 11 ಗಂಟೆಗೆ ಕಿತ್ತೂರ ರಾಣಿ ಚನ್ನಮ್ಮ ಜಯಂತಿಯನ್ನು ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೇಳಿದರು.
ಅವರು ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಆಚರಿಸೋಣ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿದರು.
ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಸರಕಾರಿ, ಅರೆ ಸರಕಾರಿ, ಕಚೇರಿಗಳಲ್ಲಿ ಹಾಗೂ ಸರಕಾರಿ ಶಾಲಾ ಕಾಲೇಜುಗಳಲ್ಲಿ,ಹಾಗೂ ಅನುದಾನ ಶಾಲಾ ಕಾಲೇಜುಗಳಲ್ಲಿ ಬೆಳಿಗ್ಗೆ 9 ಗಂಟೆಗೆ ಕಡ್ಡಾಯವಾಗಿ ಜಯಂತಿಯನ್ನು ಆಚರಿಸಲು ತಿಳಿಸಿದರು.
ಭಾವಚಿತ್ರಕ್ಕೆ ಮಾಲಾರ್ಪಣೆ ಹೂದಾನಿಗಳಿಂದ ಆಲಂಕರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು. ಕುಡಿಯುವ ನೀರು,ಸ್ವಚ್ಛತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಯಂತೋತ್ಸವ ಸಮಿತಿ ಅಧ್ಯಕ್ಷತೆಗೆ ಜ್ಯೋತಿ ಎಂ ಮರಗೋಳ ಆಯ್ಕೆಮಾಡಲಾಯಿತು. ಉಪನ್ಯಾಸಕ ಡಾ.ಮೀನಾಕ್ಷಿ ಬಾಳಿ ಅವರನ್ನು ಆಯ್ಕೆಮಾಡಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಮಾತನಾಡಿ,ನಾಡಗೀತೆ ಸಂಗೀತ ಕಾರ್ಯಕ್ರಮ ಹಾಗೂ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗುವುದು ಮತ್ತು ಮತ್ತು ಕಿತ್ತೂರು ರಾಣಿ ಚೆನ್ನಮ್ಮರವರು ಭವ್ಯ ಮೆರುವಣಿಗೆಯು ಬೆಳ್ಳಗೆ 9 ಗಂಟೆಗೆ ಸರ್ದಾರ್ ವಲ್ಲಾಬಾಯಿ ಪಟೇಲ್ ವೃತ್ತಿದಿಂದ ಡಾ.ಎಸ್.ಎಂ.ಪಂಡಿತ ರಂಗಮಂದಿರದವರೆಗೆ ನಡಿಯಲಿದೆ ಎಂದು ಹೇಳಿದರು.
ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವಶರಣಪ ಶಿವಶರಣಪ್ಪ ಮೂಳೆಗಾಂವ, ಸಮಾಜದ ಮುಖಂಡರಾದ ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಕಾರ್ಯದರ್ಶಿ ಡಾ. ಶ್ರೀ ಶೈಲ ಘೋಳಿ.ರಾಷ್ಟ್ರೀಯ ಬಸವ ದಳ,ಬಸವ ಮಂಟಪ ಮಹಾಂತನಗರ ಆರ್.ಜಿ.ಶೆಟ್ಟಿಗಾರ,.ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕಾರ್ಯಕಾರಣಿ ಶ್ರೀ ದೇವಿ ಎಸ್.ಅಖಿಲ ಭಾರತ ವೀರ ಶೈವ ಲಿಂಗಾಯತ ಮಾಹಾಸಭಾ ಕಾರ್ಯಕಾರಿಣಿ ವಿಜಯಲಕ್ಷ್ಮೀ ಡಿ ಪಾಟೀಲ್. ಸೇರಿದಂತೆ ಸಮಾಜ ಮುಖಂಡರು ಭಾಗವಹಿಸಿದ್ದರು.
Post a Comment