Clickable Image

Saturday, October 5, 2024

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್*




ಕಲಬುರಗಿ,ಅ.5(ಕ.ವಾ) ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ ಪ್ರದೇಶದ ವಿವಿಧ ಕೈಗಾರಿಕಾ ಘಟಕಗಳಿಗೆ ಭೇಟಿ ನೀಡಿ ಉದ್ಯಮಿದಾರರ ಜೊತೆಗೆ ಸಂವಾದ-ಸಮಾಲೋಚನೆ ನಡೆಸಿದಲ್ಲದೆ ಅವರ ಅಹವಾಲು ಆಲಿಸಿದರು.


ನಗರದ ಹೊರವಲಯದ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಕೈಗಾರಿಕಾ ಪ್ರದೇಶದ 3ನೇ ಹಂತದ ಕೈಗಾರಿಕಾ ಪ್ರದೇಶಕ್ಕೆ ಮೊದಲು ಭೇಟಿ ನೀಡಿದ ಅವರು, ಅಲ್ಲಿ ಕೈಗಾರಿಕಾಭಿವೃದ್ಧಿಗೆ 600 ಎಕರೆ ಭೂಮಿಯನ್ನು ಭೂಸ್ವಾಧೀನ ಪಡಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಿ ಕೆ.ಐ.ಎ.ಡಿ.ಬಿ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.



ನಂದೂರ-ಕೆಸರಟಗಿ ಪ್ರದೇಶದ 1ನೇ ಮತ್ತು 2ನೇ ಹಂತದಲ್ಲಿ ವಿನೂತನವಾಗಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಕೆ.ಐ.ಎ.ಡಿ.ಬಿ. ಮೂಲಕ ನಿರ್ಮಿಸಲಾಗುತ್ತಿರುವ ಪ್ಲಗ್ ಎಂಡ್ ಪ್ಲೇ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ, ತ್ವರಿತಗತಿಯಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಇದೇ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 50 ಎಕರೆ ಜಾಗದಲ್ಲಿರುವ ಗುಲಬರ್ಗಾ ಟೆಕ್ಸ್ ಟೈಲ್ ಪಾರ್ಕ್‌ಗೆ ಭೇಟಿ ನೀಡಿದಲ್ಲದೆ 40 ಎಕರೆ ಜಾಗದಲ್ಲಿರುವ ಮಹಿಳಾ 

ಪಾರ್ಕ್‌ಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಕ್ಕಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿದರು.


*ಫ್ಲ್ಯಾಟ್ ಫ್ಯಾಕ್ಟರಿ ಸ್ಥಳಕ್ಕೂ ಭೇಟಿ:*


ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ ಪ್ರದೇಶದ 3ನೇ ಹಂತದಲ್ಲಿ ಸುಮಾರು 20 ಎಕರೆ ಜಾಗದಲ್ಲಿ ಹೊಸದಾಗಿ ಸ್ಥಾಪಿಸಲು ಉದ್ದೇಶಿಸಿರುವ ಕಲಬುರಗಿ ಅಟೋ ಪಾರ್ಕ್, ಐ.ಟಿ. ಹಬ್ ಹಾಗೂ ಫ್ಲ್ಯಾಟ್ ಫ್ಯಾಕ್ಟರಿ ಸ್ಥಳಕ್ಕೂ ಭೇಟಿ ನೀಡಿದ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಭೂಮಿ ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮುನೋಳಿ, ಉಪ ನಿರ್ದೇಶಕ ಅಬ್ದುಲ್ ಅಜೀಮ್, ಕೆ.ಐ.ಎ.ಡಿ.ಬಿ ಕಾರ್ಯನಿರ್ವಾಹಕ ಅಭಿಯಂತರ ಅಶೋಕ ಖಂಡ್ರೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪರಮೇಶ್ವರ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಶಿವಶಂಕರ ಹಾಗೂ ಇತರೆ ಅಧಿಕಾರಿಗಳಿದ್ದರು.

Post a Comment

Whatsapp Button works on Mobile Device only